ಬೆಂಗಳೂರು: ಪರಿಸರಕ್ಕೆ ಹಾನಿ ಉಂಟು ಮಾಡುವ ಹಲವು ಬಗೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಿ ಅರಣ್ಯ, ಪರಿಸರ ಮತ್ತು ಜೀವ ವಿಜ್ಞಾನ ಇಲಾಖೆಯು ಆದೇಶ ಹೊರಡಿಸಿ ಆರು ದಿನ ಕಳೆದರೂ ಈ ನಿಯಮ ಕಟ್ಟುನಿಟ್ಟಾಗಿ ಜಾರಿಯಾಗಿಲ್ಲ. ‘ಪ್ರಜಾವಾಣಿ’ ಪ್ರತಿನಿಧಿ ಬುಧವಾರ ನಗರದ ಕೆ.ಆರ್.ಮಾರುಕಟ್ಟೆಯ ಸುತ್ತಮುತ್ತ ತಿರುಗಾಡಿದಾಗ ಈ ಸಂಗತಿ ಬೆಳಕಿಗೆ ಬಂದಿತು. ಕೆ.ಆರ್.ಮಾರುಕಟ್ಟೆ, ಅವೆನ್ಯೂ ರಸ್ತೆಗಳಲ್ಲಿ ಜನರು ತರಕಾರಿ, ಹೂವು, ಹಣ್ಣು, ದಿನಸಿ ವಸ್ತುಗಳನ್ನು ಕೊಂಡೊಯ್ಯಲು