CM of Karnataka인증된 계정

@CMofKarnataka

Official Page of the Chief Minister's Office, Karnataka

Bengaluru, Karnataka
가입일: 2014년 8월

트윗

@CMofKarnataka 님을 차단했습니다

정말로 이 트윗을 보시겠어요? 트윗을 봐도 @CMofKarnataka 님의 차단을 해제하지 않습니다

  1. 13시간 전

    2. ಎಲ್ಲ ಹಂತಗಳಲ್ಲಿಯೂ ಆಡಳಿತ ಯಂತ್ರ ಚುರುಕುಗೊಳಿಸಲು ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಯಿತು...

    이 스레드 보기
    취소
  2. 13시간 전

    ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿಯವರು ನೀಡಿದ ಪ್ರಮುಖ ಸೂಚನೆಗಳು ~ 1. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನವೇ ಮುಖ್ಯ ಕಾರ್ಯದರ್ಶಿಗಳು ಹಾಗೂ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳ ಸಭೆ ನಡೆಸಿ ಸರ್ಕಾರದ ಆಶಯ, ಆದ್ಯತೆಗಳ ಕುರಿತು ಸಂಕ್ಷಿಪ್ತವಾಗಿ ತಿಳಿಸಲಾಗಿದೆ.

    이 스레드 보기
    취소
  3. 13시간 전

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದಿಸಿದರು.

    취소
  4. 18시간 전

    ಕೇಂದ್ರ ಸರ್ಕಾರವು ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ ವಾರ್ಷಿಕ 6 ಸಾವಿರ ರೂಪಾಯಿ ನೆರವು ನೀಡುವ ಯೋಜನೆಗೆ ಪೂರಕವಾಗಿ ಕರ್ನಾಟಕ ಸರ್ಕಾರವು ಘೋಷಿಸಿರುವ 4 ಸಾವಿರ ರೂಪಾಯಿ ನೆರವಿನ ಯೋಜನೆ ಜಾರಿಗೆ ಇನ್ನೆರಡು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು.

    취소
  5. 21시간 전

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಭೆ ನಡೆಸಿದರು.

    취소
  6. 8월 1일

    ವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಖ್ಯಮಂತ್ರಿಗಳ ಸೂಚನೆ ---- ರಾಜ್ಯದಲ್ಲಿ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಳವಳಕಾರಿ. ಇವುಗಳಿಗೆ ಕಡಿವಾಣ ಹಾಕಲು ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.

    취소
  7. 님이 리트윗했습니다
    8월 1일
    취소
  8. 8월 1일

    ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಿಎಂ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ರಜನೀಶ್ ಗೋಯಲ್, ಡಾ.ಇ.ವಿ. ರಮಣ ರೆಡ್ಡಿ, ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್ ರಾಜು ಉಪಸ್ಥಿತರಿದ್ದರು.

    취소
  9. 8월 1일

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬೆಳೆ ಸಮೀಕ್ಷೆ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    취소
  10. 8월 1일

    ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್ ಎನ್ ಪ್ರಸಾದ್,ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    취소
  11. 8월 1일

    ವಿಧಾನ ಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರಿ ಕೆಲಸದ ವೇಳೆಯಲ್ಲಿ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಹಾಜರಿರಬೇಕೆಂಬ ಸೂಚನೆಯನ್ನು ನೀಡುವುದರ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು.

    취소
  12. 7월 31일

    ರಾಜಭವನದಲ್ಲಿ ಇಂದು ಆಯೋಜಿಸಲಾಗಿದ್ದ ಪೊಲೀಸ್ ಪದಕ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲ ವಾಜುಭಾಯಿ ವಾಲ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿ ಪೊಲೀಸ್ ಇಲಾಖೆಯ 66 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪ್ರದಾನ ಮಾಡಿದರು.

    취소
  13. 7월 31일

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಚಿಕ್ಕಮಗಳೂರಿನಲ್ಲಿ ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಶಾಸಕರಾದ ರಾಜೇಗೌಡ, ಆರ್. ಅಶೋಕ್, ಎಸ್. ಎಲ್. ಭೋಜೇಗೌಡ ಜೊತೆಗಿದ್ದರು.

    취소
  14. 7월 31일

    ವಿಧಾನಸಭೆ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿನಂದಿಸಿದರು.

    취소
  15. 7월 31일

    Chief Minister BS Yediyurappa has expressed shock and heartfelt condolences on the death of , founder of & son-in-law of former Chief Minister SM Krishna. "My heart goes with the bereaved family and may God rest his soul in peace," he said in a message

    취소
  16. 7월 31일

    ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಅಳಿಯ ಹಾಗೂ 'ಕೆಫೆ ಕಾಫಿ ಡೇ' ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ ಅವರ ನಿಧನ ತೀವ್ರ ಆಘಾತ ಹಾಗೂ ದುಃಖ ತಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. "ಭಗವಂತನು ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಸಿಗಲಿ."

    취소
  17. 7월 30일
    취소
  18. 7월 30일

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿ ಹಾಗೂ ಮಳೆ ಹಾನಿ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    취소
  19. 7월 30일

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೃಷ್ಣಾದಲ್ಲಿ ಕೊಡಗು ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿದರು.ಸಭೆಯಲ್ಲಿ ಶಾಸಕರಾದ ಕೆ.ಜಿ. ಬೋಪಯ್ಯ,ಅಪ್ಪಚ್ಚು ರಂಜನ್,ಸುನಿಲ್ ಸುಬ್ರಹ್ಮಣ್ಯ,ಸಿಎಂ ಅವರ ಸಲಹೆಗಾರ ಎಂ.ಲಕ್ಷ್ಮೀನಾರಾಯಣ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

    취소
  20. 7월 30일

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ವಿಧಾನಸಭೆ ಅಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಗೋವಿಂದ ಎಂ. ಕಾರಜೋಳ, ಆರ್. ಅಶೋಕ್, ಜಗದೀಶ್ ಶೆಟ್ಟರ್, ಕೆ ಎಸ್. ಈಶ್ವರಪ್ಪ, ಎಸ್. ಸುರೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

    , 님, 님 외 2명
    취소

로딩하는데 시간이 지연되고 있습니다.

트위터의 트래픽이 폭주했거나 일시적인 문제가 발생했을 수 있습니다. 다시 시도하거나 트위터 상태 페이지를 방문하여 자세한 내용을 확인해 보세요.

    관심사 추천:

    ·