CM of KarnatakaVerified account

@CMofKarnataka

Official Page of the Chief Minister's Office, Karnataka

Bengaluru, Karnataka
Joined August 2014

Media

  1. Aug 11

    ಆನೆಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಇಂದು ವಿಶ್ವ ಆನೆ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ದೇಶದಲ್ಲಿಯೇ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯ ನಮ್ಮದು. ಆನೆಗಳ ಸಹಜ ಜೀವನಕ್ಕೆ ಪೂರಕ ವಾತಾವರಣ ನಿರ್ಮಾಣ, ಗಜ ಹತ್ಯೆ ತಡೆ ಸೇರಿದಂತೆ ರಾಜ್ಯ ಸರ್ಕಾರ ಆನೆಗಳ ಸಂರಕ್ಷಣೆಗೆ ಕಟಿಬದ್ಧವಾಗಿದೆ.

  2. Aug 11

    ಮಹಾನ್ ಬಾಹ್ಯಾಕಾಶ ವಿಜ್ಞಾನಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಂಸ್ಥಾಪಕ ಡಾ. ವಿಕ್ರಮ್ ಸಾರಾಭಾಯ್ ಅವರ ಜನ್ಮದಿನದಂದು ಅವರನ್ನು ವಿಶೇಷವಾಗಿ ಸ್ಮರಿಸೋಣ. ಭಾರತೀಯ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಪ್ರಯತ್ನಗಳಿಂದಾಗಿ ಭಾರತ ಬಾಹ್ಯಾಕಾಶದಲ್ಲಿ ಮಹತ್ವದ ಸಾಧನೆಗಳನ್ನು ಸಾಧಿಸಿದೆ.

  3. Aug 11

    ಪ್ರಧಾನಮಂತ್ರಿ ಶ್ರೀ ರವರು ಕೋವಿಡ್-19 ಸಕ್ರಿಯ ಪ್ರಕರಣಗಳು ಹೆಚ್ಚಿರುವ 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ನಡೆಸಿದ ವೀಡಿಯೋ ಸಂವಾದದಲ್ಲಿ, ಮುಖ್ಯಮಂತ್ರಿ ಶ್ರೀ ರವರ ಅನುಪಸ್ಥಿತಿಯಲ್ಲಿ, ರಾಜ್ಯದ ಪರವಾಗಿ ಉಪಮುಖ್ಯಮಂತ್ರಿ , ವೈದ್ಯಕೀಯ ಶಿಕ್ಷಣ ಸಚಿವ ಪಾಲ್ಗೊಂಡಿದ್ದರು. (1/2)

    Show this thread
  4. Aug 10

    ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಭಗವಂತ ಶ್ರೀಕೃಷ್ಣ ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

  5. Aug 10

    ಮುಖ್ಯಮಂತ್ರಿ ಶ್ರೀ ರವರು ಕೋವಿಡ್-19 ನಿಂದ ಪೂರ್ಣಗುಣಮುಖರಾಗಿ ಇಂದು ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತಮಗೆ ಚಿಕಿತ್ಸೆ ನೀಡಿದ ವೈದ್ಯರು, ಶುಶ್ರೂಷಕರು, ಸಿಬ್ಬಂದಿಗಳಿಗೆ ಮುಖ್ಯಮಂತ್ರಿಗಳು ಧನ್ಯವಾದ ಸಲ್ಲಿಸಿದ್ದಾರೆ. ತಮ್ಮ ಚೇತರಿಕೆಗಾಗಿ ಹಾರೈಸಿದ ಸಮಸ್ತ ನಾಗರಿಕರಿಗೆ ಕೃತಜ್ಞತೆಗಳನ್ನು ವ್ಯಕ್ತಪಡಿಸಿದ್ದಾರೆ.

  6. Aug 10

    ಪ್ರಧಾನಮಂತ್ರಿ ಶ್ರೀ ರವರು ದೇಶದಲ್ಲಿ ಪ್ರವಾಹ ಪರಿಸ್ಥಿತಿಯ ಕುರಿತು ಇಂದು ನಡೆಸಿದ ವೀಡಿಯೋ ಸಂವಾದ ಸಭೆಯಲ್ಲಿ, ಮುಖ್ಯಮಂತ್ರಿ ಶ್ರೀ ರವರ ಅನುಪಸ್ಥಿತಿಯಲ್ಲಿ, ರಾಜ್ಯದ ಪರವಾಗಿ ಗೃಹ ಸಚಿವ ಮತ್ತು ಕಂದಾಯ ಸಚಿವ ಭಾಗವಹಿಸಿದ್ದರು. ಸಭೆಯ ಪ್ರಮುಖಾಂಶಗಳು;

  7. Aug 10

    ಪ್ರಧಾನಮಂತ್ರಿ ಶ್ರೀ ರವರು ಇಂದು ದೇಶದಲ್ಲಿ ಪ್ರವಾಹ ಪರಿಸ್ಥಿತಿಯ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವೀಡಿಯೋ ಸಂವಾದದಲ್ಲಿ, ರಾಜ್ಯದ ಪರವಾಗಿ ಮುಖ್ಯಮಂತ್ರಿ ಶ್ರೀ ರವರ ಅನುಪಸ್ಥಿತಿಯಲ್ಲಿ, ಗೃಹ ಸಚಿವ , ಕಂದಾಯ ಸಚಿವ ಭಾಗವಹಿಸಿದರು. (1/2)

    Show this thread
  8. Aug 9

    ಭಾರತದ ಮಾಜಿ ರಾಷ್ಟ್ರಪತಿಗಳು, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಅಪಾರ ಸೇವೆ ಸಲ್ಲಿಸಿರುವ ಭಾರತರತ್ನ ಶ್ರೀ ವಿ.ವಿ.ಗಿರಿ ರವರ ಜನ್ಮದಿನದಂದು ಅವರನ್ನು ಸ್ಮರಿಸೋಣ. ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಅವರ ಸೇವೆ ಮತ್ತು ಸಾಧನೆಗಳನ್ನು ದೇಶ ಮರೆಯುವುದಿಲ್ಲ.

  9. Aug 8

    ರಾಜ್ಯದ ರೈತರ ಪರವಾಗಿ ಪ್ರಧಾನಿ ಶ್ರೀ ಯವರಿಗೆ ಪಿ.ಎಂ.ಕಿಸಾನ್ ಯೋಜನೆಗಾಗಿ ನನ್ನ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿ ರೂ.ಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡಲಾಗುತ್ತಿದೆ. ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯೋಜನೆ ಪರಿಣಾಮಕಾರಿಯಾಗಿದೆ.

  10. Aug 8

    ಕನ್ನಡ ಸಾಹಿತ್ಯಲೋಕದ ದಿಗ್ಗಜರಲ್ಲಿ ಒಬ್ಬರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ಡಾ ವಿ.ಕೃ.ಗೋಕಾಕ್‌ ಅವರ ಜನ್ಮದಿನದಂದು ಅವರನ್ನು ಸ್ಮರಿಸೋಣ. ಕವಿ, ನಾಟಕಕಾರ, ಕಾದಂಬರಿಕಾರ, ವಿಮರ್ಶಕ, ಕಥೆಗಾರ ಸೇರಿದಂತೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ವಿ.ಕೃ.ಗೋಕಾಕ್ ನಾಡಿನ ಹೆಮ್ಮೆಯಾಗಿದ್ದಾರೆ.

  11. Aug 8

    ಬ್ರಿಟೀಶರ ವಿರುದ್ಧ ಸ್ವಾತಂತ್ರ್ಯ ಸಂಗ್ರಾಮದ ನಿರ್ಣಾಯಕ ಹೋರಾಟವಾದ "ಭಾರತ ಬಿಟ್ಟು ತೊಲಗಿ" ಚಳುವಳಿ ಪ್ರಾರಂಭವಾಗಿ 78 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಸೇರಿದಂತೆ ಎಲ್ಲ ಸ್ವಾತಂತ್ರ್ಯ ವೀರರನ್ನು ಗೌರವಾದರಗಳಿಂದ ಸ್ಮರಿಸೋಣ, ಅವರ ದೇಶಭಕ್ತಿ, ತ್ಯಾಗ, ಬಲಿದಾನಗಳಿಂದ ಪ್ರೇರಣೆ ಪಡೆಯೋಣ.

  12. Aug 7

    ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣ ಚಳವಳಿಯಲ್ಲಿಯೂ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್.ನಿಜಲಿಂಗಪ್ಪನವರ ಪುಣ್ಯತಿಥಿಯಂದು ಅವರಿಗೆ ಶತಶತ ಪ್ರಣಾಮಗಳು. ಕೃಷಿ, ನೀರಾವರಿ, ಕೈಗಾರಿಕೆ, ಸಾರಿಗೆ ಕ್ಷೇತ್ರಗಳೂ ಸೇರಿದಂತೆ ಆಧುನಿಕ ಕರ್ನಾಟಕ ನಿರ್ಮಾಣದಲ್ಲಿ ನಿಜಲಿಂಗಪ್ಪನವರ ಸಾಧನೆಗಳನ್ನು ದೇಶ ಎಂದೂ ಮರೆಯುವುದಿಲ್ಲ.

  13. Aug 7

    ಮಣಿಪಾಲ್ ಆಸ್ಪತ್ರೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಶ್ರೀ ರವರ ಇಂದಿನ ಮೆಡಿಕಲ್ ಬುಲೆಟಿನ್: ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ತಮ್ಮ ಕೊಠಡಿಯಿಂದಲೇ ದೈನಂದಿನ ಕಾರ್ಯಚಟುವಟಿಕೆಗಳನ್ನು ಸಹಜವಾಗಿ ನಿರ್ವಹಿಸುತ್ತಿದ್ದಾರೆ. ತಜ್ಞ ವೈದ್ಯರ ತಂಡ ನಿರಂತರ ನಿಗಾ ವಹಿಸಿದೆ.

  14. Aug 6

    ಶ್ರೇಷ್ಠ ಕವಿ, ದಾರ್ಶನಿಕ ಗುರುದೇವ ಶ್ರೀ ರವೀಂದ್ರನಾಥ ಟ್ಯಾಗೋರ್ ಅವರ ಪುಣ್ಯತಿಥಿಯಂದು ಅವರಿಗೆ ನಮ್ಮ ನಮನಗಳನ್ನು ಸಲ್ಲಿಸೋಣ. ಸಾಹಿತ್ಯದ ಜೊತೆಗೆ ಸಾಮಾಜಿಕ ಶಾಂತಿ, ಸಾಮರಸ್ಯ ಮತ್ತು ಭ್ರಾತೃತ್ವ ನಿರ್ಮಾಣಕ್ಕೆ ಅವರ ಕೊಡುಗೆ ಅನನ್ಯ.

  15. Aug 6

    ಮಣಿಪಾಲ್ ಆಸ್ಪತ್ರೆ ಮುಖ್ಯಮಂತ್ರಿ ಶ್ರೀ ರವರ ಇಂದಿನ ಮೆಡಿಕಲ್ ಬುಲೆಟಿನ್ ಅನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ತಮ್ಮ ಕೊಠಡಿಯಿಂದಲೇ ದೈನಂದಿನ ಕಾರ್ಯಚಟುವಟಿಕೆಗಳನ್ನು ಸಹಜವಾಗಿ ನಿರ್ವಹಿಸುತ್ತಿದ್ದಾರೆ. ತಜ್ಞವೈದ್ಯರ ತಂಡ ನಿರಂತರ ನಿಗಾ ವಹಿಸಿದೆ.

    Show this thread
  16. Aug 5

    ಮುಖ್ಯಮಂತ್ರಿ ಶ್ರೀ ರವರ ಮೆಡಿಕಲ್ ಬುಲೆಟಿನ್ ಅನ್ನು ಮಣಿಪಾಲ್ ಆಸ್ಪತ್ರೆ ಬಿಡುಗಡೆ ಮಾಡಿದೆ. ಮಾನ್ಯ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಅವರು ತಮ್ಮ ಕೊಠಡಿಯಿಂದಲೇ ದೈನಂದಿನ ಕಾರ್ಯಚಟುವಟಿಕೆಗಳನ್ನು ಸಹಜವಾಗಿ ನಿರ್ವಹಿಸುತ್ತಿದ್ದಾರೆ. ತಜ್ಞ ವೈದ್ಯರುಗಳ ತಂಡ ನಿರಂತರ ನಿಗಾ ವಹಿಸಿದೆ.

  17. Aug 4

    Hon'ble Chief Minister Shri today held a telephonic meeting with officials about ramping up of ventilator beds for treatment of Covid patients. He directed officials to appoint personnel required for Covid treatment including anaesthetists, doctors and para-medical staff.

  18. Aug 4

    ರಾಜ್ಯದಲ್ಲಿ ಕೊರೋನಾ ಚಿಕಿತ್ಸೆಗೆ ಅಗತ್ಯವಾಗಿರುವ ವೆಂಟಿಲೇಟರ್ ಬೆಡ್ ಗಳನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ರವರು ಇಂದು ಅಧಿಕಾರಿಗಳೊಂದಿಗೆ ದೂರವಾಣಿ ಮುಖಾಂತರ ಸಭೆ ನಡೆಸಿದರು. ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿಗಳು ಆಸ್ಪತ್ರೆಯಿಂದಲೇ ಅಧಿಕಾರಿಗಳ ಸಭೆ ನಡೆಸಿದ್ದಾರೆ.

  19. Aug 3

    ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ರವರು ತಮ್ಮ ಆರೋಗ್ಯದ ಬಗ್ಗೆ ತಾವೇ ಸ್ವತಃ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಜನತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸೋಂಕು ಹರಡದಂತೆ ತಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

  20. Aug 2

    ನಾಡಿನ ಎಲ್ಲ ಸಹೋದರ ಸಹೋದರಿಯರಿಗೆ ರಕ್ಷಾಬಂಧನದ ಹೃತ್ಪೂರ್ವಕ ಶುಭಾಶಯಗಳು. ಭ್ರಾತೃತ್ವದ ಸಂಬಂಧವನ್ನು ಸಂಭ್ರಮಿಸುವ, ಬಾಂಧವ್ಯವನ್ನು ಗಟ್ಟಿಗೊಳಿಸುವ ರಕ್ಷಾಬಂಧನ ಎಲ್ಲರ ಬಾಳಿನಲ್ಲಿ ಸಂತಸದ ಹೊಂಬೆಳಕನ್ನು ಮೂಡಿಸಲಿ ಎಂದು ಹಾರೈಸುತ್ತೇನೆ.

Loading seems to be taking a while.

Twitter may be over capacity or experiencing a momentary hiccup. Try again or visit Twitter Status for more information.

    You may also like

    ·