CM of Karnataka认证账号

@CMofKarnataka

Official Page of the Chief Minister's Office, Karnataka

Bengaluru, Karnataka
加入于 2014年8月

媒体

  1. ಭಾರತದ ಮಾಜಿ ರಾಷ್ಟ್ರಪತಿಗಳು, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಅಪಾರ ಸೇವೆ ಸಲ್ಲಿಸಿರುವ ಭಾರತರತ್ನ ಶ್ರೀ ವಿ.ವಿ.ಗಿರಿ ರವರ ಜನ್ಮದಿನದಂದು ಅವರನ್ನು ಸ್ಮರಿಸೋಣ. ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಅವರ ಸೇವೆ ಮತ್ತು ಸಾಧನೆಗಳನ್ನು ದೇಶ ಮರೆಯುವುದಿಲ್ಲ.

  2. 8月9日

    ರಾಜ್ಯದ ರೈತರ ಪರವಾಗಿ ಪ್ರಧಾನಿ ಶ್ರೀ ಯವರಿಗೆ ಪಿ.ಎಂ.ಕಿಸಾನ್ ಯೋಜನೆಗಾಗಿ ನನ್ನ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿ ರೂ.ಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡಲಾಗುತ್ತಿದೆ. ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯೋಜನೆ ಪರಿಣಾಮಕಾರಿಯಾಗಿದೆ.

  3. 8月9日

    ಕನ್ನಡ ಸಾಹಿತ್ಯಲೋಕದ ದಿಗ್ಗಜರಲ್ಲಿ ಒಬ್ಬರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ಡಾ ವಿ.ಕೃ.ಗೋಕಾಕ್‌ ಅವರ ಜನ್ಮದಿನದಂದು ಅವರನ್ನು ಸ್ಮರಿಸೋಣ. ಕವಿ, ನಾಟಕಕಾರ, ಕಾದಂಬರಿಕಾರ, ವಿಮರ್ಶಕ, ಕಥೆಗಾರ ಸೇರಿದಂತೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ವಿ.ಕೃ.ಗೋಕಾಕ್ ನಾಡಿನ ಹೆಮ್ಮೆಯಾಗಿದ್ದಾರೆ.

  4. 8月9日

    ಬ್ರಿಟೀಶರ ವಿರುದ್ಧ ಸ್ವಾತಂತ್ರ್ಯ ಸಂಗ್ರಾಮದ ನಿರ್ಣಾಯಕ ಹೋರಾಟವಾದ "ಭಾರತ ಬಿಟ್ಟು ತೊಲಗಿ" ಚಳುವಳಿ ಪ್ರಾರಂಭವಾಗಿ 78 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಸೇರಿದಂತೆ ಎಲ್ಲ ಸ್ವಾತಂತ್ರ್ಯ ವೀರರನ್ನು ಗೌರವಾದರಗಳಿಂದ ಸ್ಮರಿಸೋಣ, ಅವರ ದೇಶಭಕ್ತಿ, ತ್ಯಾಗ, ಬಲಿದಾನಗಳಿಂದ ಪ್ರೇರಣೆ ಪಡೆಯೋಣ.

  5. 8月8日

    ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣ ಚಳವಳಿಯಲ್ಲಿಯೂ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್.ನಿಜಲಿಂಗಪ್ಪನವರ ಪುಣ್ಯತಿಥಿಯಂದು ಅವರಿಗೆ ಶತಶತ ಪ್ರಣಾಮಗಳು. ಕೃಷಿ, ನೀರಾವರಿ, ಕೈಗಾರಿಕೆ, ಸಾರಿಗೆ ಕ್ಷೇತ್ರಗಳೂ ಸೇರಿದಂತೆ ಆಧುನಿಕ ಕರ್ನಾಟಕ ನಿರ್ಮಾಣದಲ್ಲಿ ನಿಜಲಿಂಗಪ್ಪನವರ ಸಾಧನೆಗಳನ್ನು ದೇಶ ಎಂದೂ ಮರೆಯುವುದಿಲ್ಲ.

  6. 8月7日

    ಮಣಿಪಾಲ್ ಆಸ್ಪತ್ರೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಶ್ರೀ ರವರ ಇಂದಿನ ಮೆಡಿಕಲ್ ಬುಲೆಟಿನ್: ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ತಮ್ಮ ಕೊಠಡಿಯಿಂದಲೇ ದೈನಂದಿನ ಕಾರ್ಯಚಟುವಟಿಕೆಗಳನ್ನು ಸಹಜವಾಗಿ ನಿರ್ವಹಿಸುತ್ತಿದ್ದಾರೆ. ತಜ್ಞ ವೈದ್ಯರ ತಂಡ ನಿರಂತರ ನಿಗಾ ವಹಿಸಿದೆ.

  7. 8月7日

    ಶ್ರೇಷ್ಠ ಕವಿ, ದಾರ್ಶನಿಕ ಗುರುದೇವ ಶ್ರೀ ರವೀಂದ್ರನಾಥ ಟ್ಯಾಗೋರ್ ಅವರ ಪುಣ್ಯತಿಥಿಯಂದು ಅವರಿಗೆ ನಮ್ಮ ನಮನಗಳನ್ನು ಸಲ್ಲಿಸೋಣ. ಸಾಹಿತ್ಯದ ಜೊತೆಗೆ ಸಾಮಾಜಿಕ ಶಾಂತಿ, ಸಾಮರಸ್ಯ ಮತ್ತು ಭ್ರಾತೃತ್ವ ನಿರ್ಮಾಣಕ್ಕೆ ಅವರ ಕೊಡುಗೆ ಅನನ್ಯ.

  8. 8月6日

    ಮಣಿಪಾಲ್ ಆಸ್ಪತ್ರೆ ಮುಖ್ಯಮಂತ್ರಿ ಶ್ರೀ ರವರ ಇಂದಿನ ಮೆಡಿಕಲ್ ಬುಲೆಟಿನ್ ಅನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ತಮ್ಮ ಕೊಠಡಿಯಿಂದಲೇ ದೈನಂದಿನ ಕಾರ್ಯಚಟುವಟಿಕೆಗಳನ್ನು ಸಹಜವಾಗಿ ನಿರ್ವಹಿಸುತ್ತಿದ್ದಾರೆ. ತಜ್ಞವೈದ್ಯರ ತಂಡ ನಿರಂತರ ನಿಗಾ ವಹಿಸಿದೆ.

    显示这个主题帖
  9. 8月5日

    ಮುಖ್ಯಮಂತ್ರಿ ಶ್ರೀ ರವರ ಮೆಡಿಕಲ್ ಬುಲೆಟಿನ್ ಅನ್ನು ಮಣಿಪಾಲ್ ಆಸ್ಪತ್ರೆ ಬಿಡುಗಡೆ ಮಾಡಿದೆ. ಮಾನ್ಯ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಅವರು ತಮ್ಮ ಕೊಠಡಿಯಿಂದಲೇ ದೈನಂದಿನ ಕಾರ್ಯಚಟುವಟಿಕೆಗಳನ್ನು ಸಹಜವಾಗಿ ನಿರ್ವಹಿಸುತ್ತಿದ್ದಾರೆ. ತಜ್ಞ ವೈದ್ಯರುಗಳ ತಂಡ ನಿರಂತರ ನಿಗಾ ವಹಿಸಿದೆ.

  10. 8月4日

    Hon'ble Chief Minister Shri today held a telephonic meeting with officials about ramping up of ventilator beds for treatment of Covid patients. He directed officials to appoint personnel required for Covid treatment including anaesthetists, doctors and para-medical staff.

  11. 8月4日

    ರಾಜ್ಯದಲ್ಲಿ ಕೊರೋನಾ ಚಿಕಿತ್ಸೆಗೆ ಅಗತ್ಯವಾಗಿರುವ ವೆಂಟಿಲೇಟರ್ ಬೆಡ್ ಗಳನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ರವರು ಇಂದು ಅಧಿಕಾರಿಗಳೊಂದಿಗೆ ದೂರವಾಣಿ ಮುಖಾಂತರ ಸಭೆ ನಡೆಸಿದರು. ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿಗಳು ಆಸ್ಪತ್ರೆಯಿಂದಲೇ ಅಧಿಕಾರಿಗಳ ಸಭೆ ನಡೆಸಿದ್ದಾರೆ.

  12. 8月3日

    ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ರವರು ತಮ್ಮ ಆರೋಗ್ಯದ ಬಗ್ಗೆ ತಾವೇ ಸ್ವತಃ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಜನತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸೋಂಕು ಹರಡದಂತೆ ತಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

  13. 8月3日

    ನಾಡಿನ ಎಲ್ಲ ಸಹೋದರ ಸಹೋದರಿಯರಿಗೆ ರಕ್ಷಾಬಂಧನದ ಹೃತ್ಪೂರ್ವಕ ಶುಭಾಶಯಗಳು. ಭ್ರಾತೃತ್ವದ ಸಂಬಂಧವನ್ನು ಸಂಭ್ರಮಿಸುವ, ಬಾಂಧವ್ಯವನ್ನು ಗಟ್ಟಿಗೊಳಿಸುವ ರಕ್ಷಾಬಂಧನ ಎಲ್ಲರ ಬಾಳಿನಲ್ಲಿ ಸಂತಸದ ಹೊಂಬೆಳಕನ್ನು ಮೂಡಿಸಲಿ ಎಂದು ಹಾರೈಸುತ್ತೇನೆ.

  14. 8月1日

    "ಸ್ವರಾಜ್ಯ ನನ್ನ ಜನ್ಮಸಿದ್ದ ಹಕ್ಕು" ಎಂದು ದೇಶಭಕ್ತಿ ಮತ್ತು ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೊತ್ತಿಸಿದ ಅಪ್ರತಿಮ ರಾಷ್ಟ್ರೀಯವಾದಿ, ಸಮಾಜ ಸುಧಾರಕ ಹಾಗು ಸ್ವಾತಂತ್ರ್ಯ ಹೋರಾಟಗಾರರಾದ ಲೋಕಮಾನ್ಯ ಬಾಲಗಂಗಾಧರ ತಿಲಕರ ಪುಣ್ಯಸ್ಮರಣೆಯಂದು ಅವರಿಗೆ ನಮ್ಮ ನಮನಗಳನ್ನು ಸಲ್ಲಿಸೋಣ.

  15. 7月31日

    ಮಾನ್ಯ ಮುಖ್ಯಮಂತ್ರಿ ಶ್ರೀ ರವರು ಇಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ವಜೂಭಾಯಿ ವಾಲಾರವರನ್ನು ಭೇಟಿ ಮಾಡಿ ಪ್ರಸ್ತುತ ವಿದ್ಯಮಾನಗಳ ಬಗ್ಗೆ, ಕೊರೋನಾ ಸಾಂಕ್ರಾಮಿಕದ ಸ್ಥಿತಿಗತಿ, ಸೋಂಕು ನಿಯಂತ್ರಣ ಮತ್ತು ಚಿಕಿತ್ಸೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಗೃಹ ಸಚಿವ ಉಪಸ್ಥಿತರಿದ್ದರು.

  16. 7月31日

    ಮಾನ್ಯ ಮುಖ್ಯಮಂತ್ರಿ ಶ್ರೀ ರವರು ಇಂದು‌ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ (NEP) ಅಧ್ಯಕ್ಷರಾದ, ಹಿರಿಯ ವಿಜ್ಞಾನಿ ಶ್ರೀ ಕಸ್ತೂರಿ ರಂಗನ್ ಅವರನ್ನು ಭೇಟಿಯಾಗಿ‌ ಅಭಿನಂದನೆ ಸಲ್ಲಿಸಿದರು. ಉಪಮುಖ್ಯಮಂತ್ರಿಗಳಾದ , ವಿಧಾನ ಪರಿಷತ್ ಸದಸ್ಯರಾದ ಉಪಸ್ಥಿತರಿದ್ದರು.

  17. 7月31日

    ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಈ ಹಬ್ಬವು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಿಸಿ, ಮುನ್ನೆಚ್ಚರಿಕೆ ತೆಗೆದುಕೊಂಡು ಸುರಕ್ಷತಾ ನಿಯಮಗಳನ್ನು ಪಾಲಿಸಿ.

  18. 7月30日

    ಕಂದಾಯ ಸಚಿವ , ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವ , ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್, ಶಾಸಕ , ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2)

    显示这个主题帖
  19. 7月30日

    ಮಾನ್ಯ ಮುಖ್ಯಮಂತ್ರಿ ಶ್ರೀ ರವರು ಇಂದು‌ ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರಿಕೆ ಇಲಾಖೆಯ 2013-14 ರಿಂದ 2018-19 ರವರೆಗಿನ ಮಾಹಿತಿನ್ನೊಳಗೊಂಡ ಅಂಕಿ-ಅಂಶಗಳ ಸಂಚಿಕೆಯನ್ನು‌ ಬಿಡುಗಡೆ‌ ಮಾಡಿದರು. (1/2)

    显示这个主题帖
  20. 7月30日

    ಕಾರ್ಯಕ್ರಮದಲ್ಲಿ ಕಂದಾಯ ಸಚಿವ , ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್, ಹಿರಿಯ ಅಧಿಕಾರಿಗಳು, ಮೆಟ್ರೋ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು. (2/2)

    显示这个主题帖

加载似乎需要一段时间。

Twitter 可能超载或出现了暂时故障。重试或访问 Twitter 状态以了解更多信息。

    你可能还喜欢

    ·